ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರ ನೇಮಕ
Monday, November 24, 2025
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರ ನೇಮಕ
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಭಾರತೀಯ ವಕೀಲರ ಪರಿಷತ್ತು ಆದೇಶ ಹೊರಡಿಸಿದೆ.
ಧಾರವಾಡ ಹೈಕೋರ್ಟ್‌ನ ಹಿರಿಯ ವಕೀಲರಾದ ಕಾಮರಡ್ಡಿ ವೆಂಕರಡ್ಡಿ ದೇವರಡ್ಡಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಭಾರತೀಯ ವಕೀಲರ ಪರಿಷತ್ತಿನ ಶ್ರೀಮಂತೋ ಸೆನ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಎಸ್.ಎಸ್. ಮಿಟ್ಟಲಕೋಡ ಅವರು ಈ ಹಿಂದೆ ಅಧ್ಯಕ್ಷರಾಗಿದ್ದರು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಚುನಾವಣೆ ಘೋಷಣೆ ಆದ ಹಿನ್ನೆಲೆಯಲ್ಲಿ ಈ ನಾಮನಿರ್ದೇಶನ ಮಾಡಲಾಗಿದೆ. ನಿಕಟಪೂರ್ವ ಅಧ್ಯಕ್ಷರಾದ ಎಸ್.ಎಸ್. ಮಿಟ್ಟಲಕೋಡ್ ಅವರು ಈ ಬಾರಿ ಚುನಾವಣೆಗೆ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.