-->
ನ್ಯಾಯಾಂಗ ನೌಕರರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗ: ನ್ಯಾಯಮೂರ್ತಿ ತ್ಯಾಗರಾಜ ಎನ್ ಇನವಳ್ಳಿ ಅಭಿಮತ

ನ್ಯಾಯಾಂಗ ನೌಕರರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗ: ನ್ಯಾಯಮೂರ್ತಿ ತ್ಯಾಗರಾಜ ಎನ್ ಇನವಳ್ಳಿ ಅಭಿಮತ

ನ್ಯಾಯಾಂಗ ನೌಕರರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗ: ನ್ಯಾಯಮೂರ್ತಿ ತ್ಯಾಗರಾಜ ಎನ್ ಇನವಳ್ಳಿ ಅಭಿಮತ





ಮಂಗಳೂರಿನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿ 1997 ರಲ್ಲಿ ರಾಜ್ಯ ನ್ಯಾಯಾಂಗ ಸೇವೆಗೆ ಸೇರಿ ಬೆಳಗಾವಿಯಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ಪದೋನ್ನತಿ ಹೊಂದಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ನೇಮಕಗೊಂಡ ಶ್ರೀ ತ್ಯಾಗರಾಜ ಎನ್ ಇನವಳ್ಳಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ನೌಕರರ ಪರವಾಗಿ ಗೌರವಿಸಲಾಯಿತು.


ದಿನಾಂಕ 13.12.2025 ರಂದು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಗೌರವಾನ್ವಿತ ನ್ಯಾಯಮೂರ್ತಿಗಳು ಮಂಗಳೂರಿನಲ್ಲಿ ತಾವು ವಕೀಲ ವೃತ್ತಿಯನ್ನು ಆರಂಭಿಸಿದ ದಿನಗಳನ್ನು ಸ್ಮರಿಸಿದರು.


ಆ ಅವಧಿಯಲ್ಲಿ ಮಂಗಳೂರಿನ ನ್ಯಾಯಾಂಗ ನೌಕರರು ಶಿಸ್ತು, ನಿಯಮಗಳ ಆಳವಾದ ಗ್ರಹಿಕೆ, ವಿನಯಶೀಲ ವರ್ತನೆಯಿಂದ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದರು. ಈ ಪರಂಪರೆಯನ್ನು ಹಾಲಿ ನೌಕರರು ಮುಂದುವರಿಸಬೇಕು ಎಂದರು. ಆ ಅವಧಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬಹುತೇಕ ನೌಕರರು ನಿವೃತ್ತರಾಗಿದ್ದು ಕೆಲವರು ಸೇವೆಯಲ್ಲಿದ್ದಾರೆ. ಅಂಥವರ ಪೈಕಿ ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಶಿರಸ್ತೇದಾರ್ ಶ್ರೀ ಪ್ರಕಾಶ್ ನಾಯಕ್, ಶ್ರೀ ರಾಜೇಶ್ ಎಂ. ಮುಂತಾದವರ ಸೇವೆಯನ್ನು ಗುರುತಿಸಿದರು.


ನ್ಯಾಯಾಲಯದ ಆದೇಶಗಳನ್ನು ಪಾಲಿಸಿ, ಕಾರ್ಯಗತಗೊಳಿಸಿ ನ್ಯಾಯಕಾಂಕ್ಷಿಗಳಿಗೆ ಶೀಘ್ರ ನ್ಯಾಯ ದೊರಕಿಸಿ ಕೊಡುವಲ್ಲಿ ನ್ಯಾಯಾಂಗದ ಅವಿಭಾಜ್ಯ ಅಂಗವಾಗಿರುವ ನೌಕರರ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಮುದ್ರಿಸಲ್ಪಟ್ಟ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.


ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ರಾಜೇಶ್ ಎಂ ಅವರು ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಹಾಗೂ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಹೆಚ್ ವಿ ರಾಘವೇಂದ್ರ, ದ.ಕ. ಜಿಲ್ಲಾ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ ಆಶಾ ಕೆ.ಪಿ. ಹಾಗೂ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article