ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್
ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್
ರೌಡಿಶೀಟರ್ ಜೊತೆಗೆ ನಿಕಟ ನಂಟು ಹೊಂದಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ವೊಬ್ಬರನ್ನು ಸಸ್ಪೆಂಡ್ ಮಾಡುವ ಮೂಲಕ ಪೊಲೀಸ್ ಇಲಾಖೆ ಭ್ರಷ್ಟ ಹಾಗೂ ಕಳಂಕಿತ ಖಾಕಿ ಪಡೆಗೆ ಸ್ಪಷ್ಟ ಸಂದೇಶ ರವಾನಿಸಿದೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯ ಜತೆಗೆ ಗಾಢ ಸಂಪರ್ಕದಲ್ಲಿದ್ದ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಾಗರಾಜು ಎಂಬಾತನನ್ನು ಅಮಾನತು ಮಾಡಲಾಗಿದೆ.
ರೌಡಿಶೀಟರ್ ದಾಸ ಎಂಬಾತನ ಜತೆ ಸಂಪರ್ಕ ಯಲಹಂಕದ ನ್ಯೂಟೌನ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಾಗರಾಜು ನಿರಂತರ ಸಂಪರ್ಕದಲ್ಲಿದ್ದರು. ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಿ ಆರೋಪಿ ಇನ್ಸ್‌ಪೆಕ್ಟರ್‌ನಾಗರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.
ಕುಖ್ಯಾತ ರೌಡಿಶೀಟರ್ ದಾಸ ಎಂಬಾತ ಹಲ್ಲೆ ಬೆದರಿಕೆ, ಭೂಕಬಳಿಕೆ ಪ್ರಕರಣಗಳು ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಆರೋಪಿಯಾಗಿ ಗುರುತಿಸಿಕೊಂಡಿದ್ದಾನೆ. ಆತನ ಜತೆಗೆ ಪಿಎಸ್‌ಐ ನಾಗರಾಜ್ ಸಂಪರ್ಕದಲ್ಲಿದ್ದು, ಆಗಾಗ ಇಬ್ಬರು ಜತೆಯಾಗಿ ಕಾಣಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಕಳಂಕಿತ ಹಾಗೂ ಅಪರಾಧಿಗಳ ಜೊತೆಗೆ ನಂಟು ಹೊಂದಿರುವ ಪೊಲೀಸ್ ಸಿಬ್ಬಂದಿಗೆ ಕಠಿಣ ಸಂದೇಶ ರವಾನಿಸಿದೆ.