ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ: ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ವಕೀಲ ಅರೆಸ್ಟ್
ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ: ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ವಕೀಲ ಅರೆಸ್ಟ್
ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಸರ್ಕಾರಿ ವಕೀಲರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಲಬುರಗಿಯ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕ ರಾಜಮಹೇಂದ್ರ ಜಿ. ಅವರು ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೌರ್ಜನ್ಯ ಪ್ರಕರಣವೊಂದಲ್ಲಿ ಉತ್ತಮ ವಾದ ಮಾಡುವುದಕ್ಕಾಗಿ ಮಹೇಂದ್ರ 50 ಸಾವಿರ ರೂಪಾಯಿ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಇದರ ಭಾಗವಾಗಿ, ತೆಲಂಗಾಣ ರಾಜ್ಯದ ವಿಕಾರಾಬಾದ ಜಿಲ್ಲೆಯ ಕಂದನುಲಿ ಗ್ರಾಮದ ನವೀನ್ ತಂದೆ ಅನಂತಯ್ಯ ಅವರಿಂದ ರೂ. 25 ಸಾವಿರ ಲಂಚ ಸ್ವೀಕರಿಸುತ್ತಿದ್ದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ಶೀಲವಂತ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅವರಿಂದ 25 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ದೌರ್ಜನ್ಯ ಪ್ರಕರಣದಲ್ಲಿ ಉತ್ತಮ ವಾದ ಮಾಡುವುದಕ್ಕಾಗಿ ಆರೋಪಿ ರಾಜಮಹೇಂದ್ರ ಜಿ. 50 ಸಾವಿರ ಬೇಡಿಕೆ ಇಟ್ಟಿದ್ದರು. ಈ ಹಿಂದೆ 20 ಸಾವಿರ ರೂ. ಸ್ವೀಕರಿಸಿದ್ದರು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.