ವಕೀಲರ ಪರಿಷತ್ತುಗಳಲ್ಲಿ ಮಹಿಳೆಯರಿಗೆ ಮೀಸಲಾತಿ: ಸುಪ್ರೀಂ ಕೋರ್ಟ್ ನಿರ್ದೇಶನ
ವಕೀಲರ ಪರಿಷತ್ತುಗಳಲ್ಲಿ ಮಹಿಳೆಯರಿಗೆ ಮೀಸಲಾತಿ: ಸುಪ್ರೀಂ ಕೋರ್ಟ್ ನಿರ್ದೇಶನ
ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಅಧಿಕಾರಿ, ಪದಾಧಿಕಾರಿ ಸ್ಥಾನಗಳಿಗೂ ಅನ್ವಯವಾಗುವಂತೆ ಶೇಕಡಾ 30ರಷ್ಟು ಸ್ಥಾನವನ್ನು ಮಹಿಳೆಯರಿಗೆ ಮೀಸಲಿಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
"ಯೋಗಮಯ ಎಂಜಿ. ಮತ್ತು ಭಾರತ ಸರ್ಕಾರ ಮತ್ತಿತರರು" ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಈ ಕ್ರಮ ಸಾಂವಿಧಾನಿಕ ಮೌಲ್ಯ ಹಾಗೂ ಲಿಂಗ ಸಮಾನತೆಗೆ ಸಂಬಂಧಿಸಿದ ಕಾನೂನು ಸುಧಾರಣೆಗೆ ಅನುಗುಣವಾಗಿದೆ. ಈ ಉದ್ದೇಶದಿಂದ ಭಾರತೀಯ ವಕೀಲರ ಪರಿಷತ್ತು ಅಸ್ತಿತ್ವದಲ್ಲಿ ಇರುವ ನಿಯಮಗಳನ್ನು ವ್ಯಾಖ್ಯಾನಿಸಿ ತಿದ್ದುಪಡಿ ಮಾಡಿದೆ. ಇದನ್ನು ಅರ್ಥೈಸಿಕೊಂಡು ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ನ್ಯಾಯಪೀಠ ಹೇಳಿದೆ.
ದೇಶದ ವಕೀಲರ ಪರಿಷತ್ತುಗಳಲ್ಲಿ ಮಹಿಳೆಯರು ಮತ್ತು ಸಮಾಜದಂಚಿನಲ್ಲಿ ಇರುವ ಗುಂಪುಗಳಿಗೆ ಸಂಪೂರ್ಣ ಕಡಿಮೆ ಪ್ರಾತಿನಿಧ್ಯ ದೊರೆತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.