-->
ವಿಚಾರಣಾ ಕೋರ್ಟ್‌ಗೆ ಎಲ್‌ಒಸಿ ಹೊರಡಿಸುವ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್‌

ವಿಚಾರಣಾ ಕೋರ್ಟ್‌ಗೆ ಎಲ್‌ಒಸಿ ಹೊರಡಿಸುವ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್‌

ವಿಚಾರಣಾ ಕೋರ್ಟ್‌ಗೆ ಎಲ್‌ಒಸಿ ಹೊರಡಿಸುವ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್‌




ವಿಚಾರಣಾ ಕೋರ್ಟ್‌ಗೆ ಎಲ್‌ಒಸಿ ಹೊರಡಿಸುವ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಸ್ಪಷ್ಟವಾಗಿ ತಿಳಿಸಿದೆ.


ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.


ಮಂಗಳೂರಿನ ಪ್ರಧಾನ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕುವೈಟ್‌ನಲ್ಲಿದ್ದ ಅರ್ಜಿದಾರ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ತೀರ್ಪು ನೀಡಿದೆ.


ಜೀವನಾಂಶ ನೀಡಬೇಕು ಎಂಬ ಆದೇಶ ಪಾಲನೆ ಮಾಡದ ಪತಿಯ ವಿರುದ್ಧ ಮಂಗಳೂರಿನ ಪ್ರಧಾನ ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಲುಕ್‌ ಔಟ್ ಸರ್ಕ್ಯೂಲರ್ (ಎಲ್‌ಒಸಿ)ನ್ನು ಹೈಕೋರ್ಟ್ ರದ್ದುಗೊಳಿಸಿದೆ.


ಅರ್ಜಿದಾರರು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಿ ಎರಡು ಲಕ್ಷ ರೂ.ಗಳ ಠೇವಣಿ ಇಡಬೇಕು ಎಂಬ ಷರತ್ತು ವಿಧಿಸಿರುವ ನ್ಯಾಯಪೀಠ, ಎಲ್‌ಒಸಿ ಅನುಷ್ಠಾನಕ್ಕೆ ಮಧ್ಯಂತರ ತಡೆ ನೀಡಿದೆ.


ಯಾವುದೇ ಪ್ರಕರಣಗಳಲ್ಲಿ ನ್ಯಾಯಾಲಯ ಎಲ್‌ಒಸಿ ರದ್ದುಗೊಳಿಸಿದರೆ ಅಂತಹ ಸಂದರ್ಭಗಳಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅದರ ಬಗ್ಗೆ ಬ್ಯೂರೊ ಆಫ್ ಇಮಿಗ್ರೇಷನ್‌ಗೆ ಮಾಹಿತಿ ನೀಡಬೇಕು ಮತ್ತು ಯಾವ ಅಧಿಕಾರಿ ಎಲ್‌ಒಸಿ ಜಾರಿಗೊಳಿಸುತ್ತಾರೋ ಅಂತಹವರಿಗೆ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ನ್ಯಾಯಪೀಠ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ತಾಕೀತು ಮಾಡಿದೆ.


ಒಂದು ವೇಳೆ ಆ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದೇ ಇದ್ದರೆ ಅಂತಹ ಅಧಿಕಾರಿಯ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಬೇಕು ಎಂದೂ ಅದೇಶಿಸಿದೆ.


'ದಂಡ ಪ್ರಕ್ರಿಯಾ ಸಂಹಿತೆ 1973ರ (ಸಿಆರ್‌ಪಿಸಿ) ಕಲಂ 125ರಡಿ ಕೌಟುಂಬಿಕ ನ್ಯಾಯಾಲಯಕ್ಕೆ ಎಲ್‌ಸಿ ಹೊರಡಿಸಿರುವ ಯಾವುದೇ ಅಧಿಕಾರವಿಲ್ಲ. ಜೀವನಾಂಶ ನೀಡುವ ಕುರಿತಾದ ಕಲಂ 125 ಅನ್ನು ನ್ಯಾಯಾಲಯ ಇತರೆ ಆದೇಶಗಳ ಮೂಲಕ ಜಾರಿಗೊಳಿಸಬಹುದು. ಒಂದು ವೇಳೆ ಪತಿ ಜೀವನಾಂಶ ನೀಡಲು ವಿಫಲವಾದರೆ ಅಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಥವಾ ಬಂಧನಕ್ಕೆ ಆದೇಶ ಹೊರಡಿಸಬಹುದು. ಆದರೆ, ಜೀವನಾಂಶ ವಸೂಲು ಮಾಡುವುದಕ್ಕಾಗಿ ಎಲ್‌ಸಿ ಹೊರಡಿಸಲು ಆಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


'ಸಿಆರ್‌ಪಿಸಿ ಕಲಂ 125ರ ಆದೇಶಗಳನ್ನು ಜಾರಿ ಮಾಡುವಾಗ ಈ ಆದೇಶದಲ್ಲಿನ ಅಂಶಗಳನ್ನು ಗಮನದಲ್ಲಿ ಇರಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸೂಕ್ತ ಸುತ್ತೋಲೆ ಹೊರಡಿಸಬೇಕು' ಎಂದೂ ಆದೇಶದಲ್ಲಿ ವಿವರಿಸಲಾಗಿದೆ.


Ads on article

Advertise in articles 1

advertising articles 2

Advertise under the article