ಮದುವೆಯ ಭರವಸೆ ನೀಡಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದ ಅಪರಾಧಿಗೆ 30 ವರ್ಷ ಕಠಿಣ ಶಿಕ್ಷೆ
ಮದುವೆಯ ಭರವಸೆ ನೀಡಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದ ಅಪರಾಧಿಗೆ 30 ವರ್ಷ ಕಠಿಣ ಶಿಕ್ಷೆ
ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸ್ ನ್ಯಾಯಾಲಯ 30 ವರ್ಷ ಕಠಿಣ ಶಿಕ್ಷೆ ಮತ್ತು 2.63 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ ತಾಲೂಕಿನ ಸಾಚೆನ್ನಿಕೊಪ್ಪಿ ಗ್ರಾಮದ ಸ್ವಪ್ಪಿಲ್ ಮಾನೆ ಶಿಕ್ಷೆಗೊಳಗಾದ ಅಪರಾಧಿ.
2023ರಲ್ಲಿ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗುವ ಜತೆಗೆ ಬಾಲಕಿ ಮೊಬೈಲ್‌ಗೆ ಅಶ್ಲೀಲ ಚಿತ್ರ ಕಳುಹಿಸಿ ಜೀವ ಬೆದರಿಕೆ ಹಾಕಿದ್ದ ಎಂದು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು ಈ ತೀರ್ಪು ಪ್ರಕಟಿಸಿದ್ದು, ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದಿಂದ 4 ಲಕ್ಷ ರೂ. ಪರಿಹಾರ ವಿತರಿಸಲು ಸೂಚಿಸಿದ್ದಾರೆ.