-->
ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲರ ಮೇಲೆ ಪೊಲೀಸರ ಹಲ್ಲೆ: ಸಿಬ್ಬಂದಿ ಮೇಲೆ ಎಫ್‌ಐಆರ್ ದಾಖಲು

ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲರ ಮೇಲೆ ಪೊಲೀಸರ ಹಲ್ಲೆ: ಸಿಬ್ಬಂದಿ ಮೇಲೆ ಎಫ್‌ಐಆರ್ ದಾಖಲು

ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲರ ಮೇಲೆ ಪೊಲೀಸರ ಹಲ್ಲೆ: ಸಿಬ್ಬಂದಿ ಮೇಲೆ ಎಫ್‌ಐಆರ್ ದಾಖಲು





ಬೆಂಗಳೂರಿನ ಖಾಸಗಿ ಕಟ್ಟಡದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವಕೀಲರೊಬ್ಬರ ಮೇಲೆ ಪೊಲೀಸ್‌ ಸಿಬ್ಬಂದಿ ಹಾಗೂ ಮತ್ತಿಬ್ಬರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಫೆಬ್ರವರಿ 6ರಂದು ರಾತ್ರಿ ಚರ್ಚ್‌ ಸ್ಟೀಟ್‌ನ ಕಲ್ಪಕಾ ಆರ್ಕೇಡ್ ಬಳಿ ಘಟನೆ ನಡೆದಿದೆ. ಈ ಸಂಬಂಧ ವಕೀಲ ಆದರ್ಶ್ ಗಂಗಲ್ ಎಂಬವರು ನೀಡಿರುವ ದೂರಿನ ಪ್ರಕಾರ, ಪೊಲೀಸ್ ಸಿಬ್ಬಂದಿ ಸತೀಶ್ ಹಾಗೂ ಮತ್ತಿಬ್ಬರು ಅಪರಿಚಿತರ ವಿರುದ್ಧ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.


ಸತೀಶ್ ಎಂಬುವವರು ಪೊಲೀಸ್ ಸಮವಸ್ತ್ರದಲ್ಲಿದ್ದರು ಎನ್ನಲಾಗಿದೆ. ದೂರುದಾರನ ಮೇಲೆ ಹಲ್ಲೆ ಮಾಡಿದವರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.


'ಕಲ್ಪಕಾ ಆರ್ಕೇಡ್‌ನಲ್ಲಿರುವ ಕಚೇರಿಯಿಂದ ಫೆ.6ರಂದು ರಾತ್ರಿ ಕೆಲಸ ಮುಗಿಸಿಕೊಂಡು 9 ಗಂಟೆ ಸುಮಾರಿಗೆ ಮನೆಗೆ ತೆರಳುವ ವೇಳೆ ಕಟ್ಟಡದ ಪ್ಯಾಸೇಜ್‌ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದನ್ನು ಕಂಡು ಮೂತ್ರ ವಿಸರ್ಜನೆ ಮಾಡದಂತೆ ಹೇಳಿದೆ. ಇದರಿಂದ ಕೋಪಗೊಂಡ ಸತೀಶ್ ಹಾಗೂ ಅಲ್ಲಿಯೇ ಮದ್ಯಪಾನ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿ ಪರಾರಿಯಾದರು'' ಎಂದು ವಕೀಲರಾದ ಆದರ್ಶ್ ದೂರಿನಲ್ಲಿ ಆರೋಪಿಸಿಸಿದ್ದಾರೆ.



Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu