-->
ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಖುಲಾಸೆ - ಮಂಗಳೂರು ಪೋಕ್ಸೋ ನ್ಯಾಯಾಲಯದ ತೀರ್ಪು

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಖುಲಾಸೆ - ಮಂಗಳೂರು ಪೋಕ್ಸೋ ನ್ಯಾಯಾಲಯದ ತೀರ್ಪು

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಖುಲಾಸೆ - ಮಂಗಳೂರು ಪೋಕ್ಸೋ ನ್ಯಾಯಾಲಯದ ತೀರ್ಪು



ಮಂಗಳೂರಿನ ಅಪ್ರಾಪ್ತ ಬಾಲಕಿಯನ್ನು ವಸತಿಗೃಹಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಬ್ಬರ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ವಿವರ:

2025ರ ಎಪ್ರಿಲ್ ತಿಂಗಳಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು ಮೊದಲನೇ ಆರೋಪಿ ತನ್ನ ಬೈಕ್‌ನಲ್ಲಿ ಕುಳ್ಳಿರಿಸಿ ಮೂಲ್ಕಿಯ ವಸತಿಗೃಹವೊಂದಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ ಮತ್ತು ಈ ಕೃತ್ಯಕ್ಕೆ ವಸತಿಗೃಹದ ಮ್ಯಾನೇಜರ್‌ ಸಹಕರಿಸಿದ್ದರು. ಈ ಇಬ್ಬರ ವಿರುದ್ಧ ಸಂತ್ರಸ್ತೆ ಬಾಲಕಿ ಮತ್ತು ಆಕೆಯ ಪೋಷಕರು ಮೂಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಘಟನೆಗೆ ಸಂಬಂಧಿಸಿದಂತೆ ದಿನಾಂಕ 23-07-2025ರಂದು ದೂರು ದಾಖಲಿಸಿಕೊಂಡ ಮೂಲ್ಕಿ ಪೊಲೀಸರು, ಆರೋಪಿಗಳಿಬ್ಬರನ್ನು ಬಂಧಿಸಿದ್ದರು. ನೊಂದ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆಕೆ ಆರು ವಾರಗಳ ಗರ್ಭಿಣಿ ಎಂದು ಗೊತ್ತಾಗಿತ್ತು. ಪ್ರಕರಣದ ವಿಸ್ತೃತ ತನಿಖೆ ನಡೆಸಿದ್ದ ಮೂಲ್ಕಿ ಪೊಲೀಸರು ಮಂಗಳೂರಿನ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು.

ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ನೊಂದ ಬಾಲಕಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ ಒಂಬತ್ತು ಮಂದಿಯನ್ನು ಸಾಕ್ಷಿ ವಿಚಾರಣೆ ನಡೆಸಿದ್ದು, 28 ದಾಖಲೆಗಳನ್ನು ನಿಶಾನೆಯಾಗಿ ಗುರುತಿಸಲಾಯಿತು.

ಅಭಿಯೋಜನೆಯ ಪರವಾಗಿ ಹಾಜರಾಗಿದ್ದ ನೊಂದ ಬಾಲಕಿ ಹಾಗೂ ಪೋಷಕರು ಅತ್ಯಾಚಾರ ನಡೆದಿದೆ ಎಂಬುದನ್ನು ನ್ಯಾಯಾಲಯಕ್ಕೆ ಸಾಕ್ಷಿ ಹೇಳಿದ್ದರು. ಪ್ರಕರಣದಲ್ಲಿ ಹಾಜರಾಗಿದ್ದ ಉಳಿದ ಸಾಕ್ಷಿಗಳೂ ಅಭಿಯೋಜನೆಯನ್ನು ಬೆಂಬಲಿಸಿ ಸಾಕ್ಷಿ ನೀಡಿದ್ದರು. ಆದರೆ, ಪೂರಕ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳ ಮೇಲೆ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆ ವಿಫಲವಾಗಿದೆ ಎಂದು ತೀರ್ಮಾನಿಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಮಾನ್ಯ ಕೆ.ಎಸ್. ಮಾನು ಅವರು ಆರೋಪಿಯನ್ನು ಆರೋಪದಿಂದ ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದರು.

ಆರೋಪಿಯ ಪರವಾಗಿ ಮೂಡಬಿದಿರೆಯ ಶರತ್ ಶೆಟ್ಟಿ ಮತ್ತು ಮಂಗಳೂರಿನ ನ್ಯಾಯವಾದಿ ರೆಹನಾ ಅವರು ವಾದಿಸಿದ್ದರು.


Ads on article

Advertise in articles 1

advertising articles 2

Advertise under the article