ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ: ಕಾನೂನು ಸಹಿತ ಪದವೀಧರರಿಗೆ ಅವಕಾಶ
ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ: ಕಾನೂನು ಸಹಿತ ಪದವೀಧರರಿಗೆ ಅವಕಾಶ
ರಾಜ್ಯದ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಈ ಹುದ್ದೆಗೆ ನೇಮಕಾತಿ ಬಯಸಿ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ ಅರ್ಹತೆ 18 ರಿಂದ 40 ವರ್ಷಗಳಾಗಿರುತ್ತದೆ. ವಯೋಮಿತಿಯಲ್ಲಿ ನಿಯಮದಂತೆ ಸಡಿಲಿಕೆ ಇರುತ್ತದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ರೂ. 44,900 ರಿಂದ ರೂ. 1,42,400 ರೂ ವರೆಗೆ ವೇತನ ಇರಲಿದೆ. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸೈನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಪೈಕಿ, ಆರ್‌ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ವಿಜ್ಞಾನ, ಕಲೆ, ವಾಣಿಜ್ಯ, ಬಿಬಿಎ, ಕಂಪ್ಯೂಟರ್ ಅಪ್ಲಿಕೇಶನ್ ಅಥವಾ ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕು.
ಸರ್ಕಾರದ ನಿಯಮಾನುಸಾರ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 161 ಕರ್ನಾಟಕ ಹೈಕೋರ್ಟ್ ಇದರ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಹೈಕೋರ್ಟ್ ಹೊರಡಿಸಿರುವ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅಗತ್ಯ ದಾಖಲೆಗಳಾದ ಐಡಿ ಪೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು.
ಅರ್ಜಿ ಸಲ್ಲಿಸಲು ಏಪ್ರಿಲ್ 15, 2026 ಕೊನೆಯ ದಿನಾಂಕವಾಗಿರುತ್ತದೆ.