-->
ಅಪ್ರಾಪ್ತ ಮಗಳ ಮೇಲೂ ಕಣ್ಣು ಹಾಕಿದ್ದ: ಮಹಿಳೆ ಜೊತೆ ಅಸಭ್ಯ ವರ್ತನೆಗೆ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌!

ಅಪ್ರಾಪ್ತ ಮಗಳ ಮೇಲೂ ಕಣ್ಣು ಹಾಕಿದ್ದ: ಮಹಿಳೆ ಜೊತೆ ಅಸಭ್ಯ ವರ್ತನೆಗೆ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌!

ಅಪ್ರಾಪ್ತ ಮಗಳ ಮೇಲೂ ಕಣ್ಣು ಹಾಕಿದ್ದ: ಮಹಿಳೆ ಜೊತೆ ಅಸಭ್ಯ ವರ್ತನೆಗೆ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌





ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೂ ಕಾಕದೃಷ್ಟಿ ಬೀರಿದ್ದ ಎಂದು ಆರೋಪಿಸಲಾದ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದ ಮೇಲೆ ಸಸ್ಪೆಂಡ್ ಆಗಿದ್ದಾರೆ.


ಮಂಗಳೂರು ನಗರ ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಅವರು ಆದೇಶ ಹೊರಡಿಸಿದ್ದು, ಆರೋಪಿತರಾಗಿರುವ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.


ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿಯ ಪತ್ನಿಯು ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ಪ್ರಾಥಮಿಕ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ ಆಯುಕ್ತರು ಉತ್ತರ ಉಪವಿಭಾಗ (ಪಣಂಬೂರು)ದ ಎಸಿಪಿಗೆ ಸೂಚಿಸಿದ್ದರು. ಎಸಿಪಿ ಅವರು ಪ್ರಾಥಮಿಕ ತನಿಖೆಯನ್ನು ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿರುವ ಹಿನ್ನಲೆಯಲ್ಲಿ ಈ ಅದೇಶ ಹೊರಬಿದ್ದಿದೆ.


ಅಪ್ರಾಪ್ತ ಮಗಳನ್ನೂ ಬಿಡದ ಕಿರಾತಕ?

ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ತಾನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾದ ಮಹಿಳೆಯೊಬ್ಬರ ಅಪ್ರಾಪ್ತ ಮಗಳ ಮೇಲೂ ಕಟ್ಟದೃಷ್ಟಿ ಬೀರಿದ್ದ. ಈ ಬಗ್ಗೆ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ತನ್ನ ತೀಟಿ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಆರೋಪಿ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಕಣ್ಣು ಹಾಕಿದ್ದ. ಆಕೆ ಒದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್‌ ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದು ಗೊತ್ತಾಗಿತ್ತು.


ಈ ಆರೋಪಕ್ಕೆ ಸಂಬಂಧಿಸಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೂ ಕೂಡ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 

Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu