ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಶಿಫಾರಸು
Tuesday, April 14, 2026
ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಶಿಫಾರಸು
ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದೆ. ಏಪ್ರಿಲ್ 14ರಂದು ನಡೆದ ಸಭೆಯ ಬಳಿಕ ಈ ಶಿಫಾರಸ್ಸುಗಳನ್ನು ಕೊಲಿಜಿಯಂ ಮಾಡಿದೆ.
ನ್ಯಾಯಾಂಗ ಅಧಿಕಾರಿಗಳಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆ ಗಣೇಶ್ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್ ಅವರ ಪದೋನ್ನತಿಗೆ ಶಿಫಾರಸ್ಸು ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್‌ಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 45 ನ್ಯಾಯಮೂರ್ತಿಗಳ ಹುದ್ದೆಗಳು ಮಾತ್ರ ಭರ್ತಿಯಾಗಿವೆ.