-->
ಟ್ರಾಫಿಕ್ ರೂಲ್ಸ್‌ ಬ್ರೇಕ್‌: ದಂಡನೆಗೆ ಮತ್ತೊಮ್ಮೆ ಶೇ 50 ರಿಯಾಯಿತಿ- ಆದರೆ, 20 ದಿನ ಮಾತ್ರ

ಟ್ರಾಫಿಕ್ ರೂಲ್ಸ್‌ ಬ್ರೇಕ್‌: ದಂಡನೆಗೆ ಮತ್ತೊಮ್ಮೆ ಶೇ 50 ರಿಯಾಯಿತಿ- ಆದರೆ, 20 ದಿನ ಮಾತ್ರ

ಟ್ರಾಫಿಕ್ ರೂಲ್ಸ್‌ ಬ್ರೇಕ್‌: ದಂಡನೆಗೆ ಮತ್ತೊಮ್ಮೆ ಶೇ 50 ರಿಯಾಯಿತಿ- ಆದರೆ, 20 ದಿನ ಮಾತ್ರ




ಟ್ರಾಫಿಕ್ ರೂಲ್ಸ್‌ ಬ್ರೇಕ್‌ ಮಾಡಿದ ಕಾರಣಕ್ಕೆ ದಂಡನೆ ಪಾವತಿಗೆ ಮತ್ತೊಮ್ಮೆ ಶೇಕಡಾ 50 ರಿಯಾಯಿತಿಯನ್ನು ಘೋಷಿಸಲಾಗಿದೆ. ಆದರೆ, ಈ ರಿಯಾಯಿತಿ ಕೇವಲ 20 ದಿನ ಮಾತ್ರ ಇರಲಿವೆ.


ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಜೂನ್ 21ರಿಂದ ಜುಲೈ 10ರ ವರೆಗೆ ಕಾಲಾವಕಾಶ ನೀಡಿ ಆದೇಶಿಸಿದೆ.


20 ದಿನ ನೀಡಿರುವ ಕಾಲಾವಕಾಶ ಬಳಸಿಕೊಂಡು ವಾಹನಗಳ ಮಾಲೀಕರು ದಂಡ ಪಾವತಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


2026ರ ಮೇ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‌ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತು ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರಿಯಾಯಿತಿ ನೀಡಿ ಆದೇಶಿಸಲಾಗಿದೆ.




Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu