ಹಣ ದುರುಪಯೋಗ, ಕರ್ತವ್ಯ ಲೋಪ ಸಾಬೀತು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮಹೇಶ್ ಜೋಷಿ ಆಜೀವ ಸದಸ್ಯತ್ವ ರದ್ದು
ಹಣ ದುರುಪಯೋಗ, ಕರ್ತವ್ಯ ಲೋಪ ಸಾಬೀತು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮಹೇಶ್ ಜೋಷಿ ಆಜೀವ ಸದಸ್ಯತ್ವ ರದ್ದು
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮಹೇಶ್ ಜೋಷಿ ಅವರ ವಿರುದ್ಧದ ಹಣ ದುರುಪಯೋಗ, ಕರ್ತವ್ಯ ಲೋಪ ಸಾಬೀತಾಗಿದೆ. ಹಾಗಾಗಿ, ಕನ್ನಡ ಸಾಹಿತ್ಯ ಪರಿಷತ್‌ನ ಅವರ ಆಜೀವ ಸದಸ್ಯತ್ವ ರದ್ದು ಪಡಿಸಲಾಗಿದೆ.
ಈ ವಿಷಯವನ್ನು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ರಾಜ್ಯ ಸರ್ಕಾರ ಈ ಕುರಿತ ವಿವರಗಳನ್ನು ನೀಡಿದೆ.
ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು ವೆಚಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ ಸಹಕಾರ ಸಂಘಗಳ ನೋಂದಣಾಧಿಕಾರಿ 2025 ಜೂನ್ 26ರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಮಹೇಶ್ ಜೋಷಿ ಅವರು ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.
ಮಹೇಶ್ ಜೋಷಿ ವಿರುದ್ಧದ ಆರೋಪಗಳನ್ನು ಸಮಗ್ರವಾಗಿ ತನಿಖೆ ನಡೆಸಲಾಗಿದೆ. ಅವರ ವಿರುದ್ಧದ ಆರೋಪಗಳು ಸಾಬೀತಾಗಿರುವ ಕಾರಣಕ್ಕೆ ಅವರ ಆಜೀವ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರಾದ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಪೀಠಕ್ಕೆ ನಿವೇದಿಸಿಕೊಂಡರು.