-->
ರಸ್ತೆ ಬದಿ ಫುಟ್‌ಪಾತ್‌ನಲ್ಲಿ ಮುಕ್ತವಾಗಿ ನಡೆಯುವುದು ಸಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ರಸ್ತೆ ಬದಿ ಫುಟ್‌ಪಾತ್‌ನಲ್ಲಿ ಮುಕ್ತವಾಗಿ ನಡೆಯುವುದು ಸಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ರಸ್ತೆ ಬದಿ ಫುಟ್‌ಪಾತ್‌ನಲ್ಲಿ ಮುಕ್ತವಾಗಿ ನಡೆಯುವುದು ಸಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು





ಫುಟ್‌ಪಾತ್‌ಗೆ ಮೀಸಲಿಟ್ಟ ಜಾಗದಲ್ಲಿ ನಡೆದಾಡುವುದು ಸಂವಿಧಾನಿಕ ಹಕ್ಕು. ರಸ್ತೆಯಲ್ಲಿ ಮೋಟಾರ್‌ ವಾಹನಗಳ ಸಂಚಾರಕ್ಕಿಂತಲೂ ಈ ಹಕ್ಕಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.


ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.


ಗುರುತಿಸಲಾದ ಪಾದಚಾರಿ ಮಾರ್ಗದಲ್ಲಿ ನಡೆಯುವುದು ಮೂಲಭೂತ ಹಕ್ಕು

ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠದ ಮಹತ್ವದ ತೀರ್ಪು

ರಸ್ತೆ ಬದಿಯಲ್ಲಿ ಸುರಕ್ಷಿತ ಪಾದಚಾರಿ ಮಾರ್ಗ ಖಾತರಿಪಡಿಸುವುದು ಆಡಳಿತದ ಜವಾಬ್ದಾರಿ

ವಾಹನ ಬಳಕೆ ಹಕ್ಕಿಗಿಂತ ಕಾಲ್ನಡಿಗೆಯ ಹಕ್ಕಿಗೆ ಹೆಚ್ಚಿನ ಆದ್ಯತೆ


"ನಗರಾಡಳಿತವು ಮೋಟಾರು ಸಾರಿಗೆಗೆ ಹೇಗೆ ಆದ್ಯತೆ ನೀಡುತ್ತದೆಯೋ, ಅದೇ ರೀತಿ ಪಾದಚಾರಿ ಮಾರ್ಗಗಳನ್ನು ಸುರಕ್ಷಿತಗೊಳಿಸಲು ಮುಂದಾಗಬೇಕು. ವಾಹನಗಳು ಆವಿಷ್ಕಾರಗೊಳ್ಳುವ ಮೊದಲೇ ಮನುಷ್ಯರು ಈ ಭೂಮಿಯ ಮೇಲೆ ನಡೆದಾಡುತ್ತಿದ್ದರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಸಂವಿಧಾನದ ವಿಧಿ 19(1)(a), 19(1)(b), 19(1)(a) ಮತ್ತು 21ನೇ ವಿಧಿಯ ಅಡಿಯಲ್ಲಿ ಚಲನೆಯ ಪ್ರಾಥಮಿಕ ಹಕ್ಕನ್ನು ಸಂವಿಧಾನ ಪ್ರಜೆಗಳಿಗೆ ನೀಡಲಾಗಿದೆ ಎಂದು ನ್ಯಾಯಪೀಠ ಸ್ಪಷ್ಟವಾಗಿ ಹೇಳಿತು.


ರಸ್ತೆ ಅಸ್ತಿತ್ವದಲ್ಲಿ ಇದ್ದರೆ ಅದರ ಎರಡೂ ಬದಿಗಳಲ್ಲಿ ಸ್ಥಳ ನಿಗದಿಪಡಿಸಿ ಪಾದಚಾರಿ ಮಾರ್ಗ ನಿರ್ಮಿಸುವುದು ಮತ್ತು ನಿರ್ವಹಿಸುವುದು ಆ ರಸ್ತೆಯ ವ್ಯಾಪ್ತಿಗೊಳಪಟ್ಟ ನಗರಾಭಿವೃದ್ಧಿ ಅಧಿಕಾರಿಗಳು, ಪಾಲಿಕೆಗಳು, ಪುರಸಭೆ ಅಥವಾ ಪಂಚಾಯತ್‌ನ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.


Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu