-->
ವಕೀಲರ ಜತೆ ದುರ್ವರ್ತನೆ ನ್ಯಾಯಾಂಗ ನಿಂದನೆಗೆ ಸಮ; ಅನುಚಿತ ವರ್ತನೆ ತೋರದಂತೆ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್‌ ತಾಕೀತು

ವಕೀಲರ ಜತೆ ದುರ್ವರ್ತನೆ ನ್ಯಾಯಾಂಗ ನಿಂದನೆಗೆ ಸಮ; ಅನುಚಿತ ವರ್ತನೆ ತೋರದಂತೆ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್‌ ತಾಕೀತು

ವಕೀಲರ ಜತೆ ದುರ್ವರ್ತನೆ ನ್ಯಾಯಾಂಗ ನಿಂದನೆಗೆ ಸಮ; ಅನುಚಿತ ವರ್ತನೆ ತೋರದಂತೆ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್‌ ತಾಕೀತು





ಕರ್ತವ್ಯ ನಿರ್ವಹಿಸುತ್ತಿರುವ ವಕೀಲರೊಂದಿಗೆ ದುರ್ವರ್ತನೆ ತೋರುವುದು ನ್ಯಾಯಾಲಯದ ನಿಂದನೆಯಾಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಕೀಲರ ಜೊತೆಗೆ ಅನುಚಿತ ವರ್ತನೆ ತೋರದಂತೆ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್‌ ನ್ಯಾಯಪೀಠ ತಾಕೀತು ಮಾಡಿದೆ.

ಅಲಹಾಬಾದ್ ಹೈಕೋರ್ಟ್‌ನ ಅರುಣ್ ಕುಮಾರ್ ಸಿಂಗ್ ದೇಶ್ವಾಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.


ಉತ್ತರ ಪ್ರದೇಶದ ಆಜಂಗಢ ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕರ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಎಂಬವರು ಹೆಚ್ಚುವರಿ ಸರ್ಕಾರಿ ವಕೀಲರೊಂದಿಗೆ ನಡೆದುಕೊಂಡ ರೀತಿಗೆ ನ್ಯಾಯಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಘಟನೆ ಹಿನ್ನೆಲೆಯಲ್ಲಿ ದುರ್ವರ್ತನೆ ತೋರಿದ್ದ ಪಿಆರ್‌ಒ ರಾಜೇಶ್ ಕುಮಾರ್ ಸಿಂಗ್ ಅವರನ್ನು ಸಂಜೆ 5 ಗಂಟೆಯವರೆಗೆ ನ್ಯಾಯಾಲಯ ವಶದಲ್ಲಿಟ್ಟು, ಬಳಿಕ ಬಿಡುಗಡೆ ಮಾಡಲಾಯಿತು.


ಸರ್ಕಾರಿ ವಕೀಲರು ನ್ಯಾಯಾಲಯದ ಅಧಿಕಾರಿಗಳಾಗಿದ್ದು, ನ್ಯಾಯಾಂಗದ ನಿರ್ದೇಶನಗಳ ಅನುಷ್ಠಾನಕ್ಕಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಪೀಠ ಅಭಿಪ್ರಾಯಪಟ್ಟಿತು. ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವುದು ಅವರ ಕರ್ತವ್ಯದ ಭಾಗವಾಗಿದೆ. ರಾಜ್ಯದ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೇ ಆಗಿದ್ದರೂ, ಇಂತಹ ಕರ್ತವ್ಯ ನಿರ್ವಹಿಸುವ ವಕೀಲರೊಂದಿಗೆ ದುರ್ವರ್ತನೆ ತೋರಿದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.


ರಾಜೇಶ್ ಕುಮಾರ್ ಸಿಂಗ್ ಅವರಿಗೆ ಪೊಲೀಸ್ ಇಲಾಖೆ "ಕಾರಣ ಕೇಳಿ" ನೋಟಿಸ್ ಜಾರಿ ಮಾಡಿದ್ದು, ಪಿಆರ್‌ಒ ಹುದ್ದೆಯಿಂದ ಅವರನ್ನು ವಜಾ ಮಾಡಲಾಗಿದೆ ಎಂದು ಇಲಾಖೆ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಎಸ್‌ಎಸ್‌ಪಿ ಕೈಗೊಂಡ ತ್ವರಿತ ಕ್ರಮವನ್ನು ನ್ಯಾಯಾಲಯ ಶ್ಲಾಘಿಸಿತು.


ನ್ಯಾಯಾಲಯದ ಆದೇಶಗಳ ಪಾಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವ ಸರ್ಕಾರಿ ವಕೀಲರೊಂದಿಗೆ ಪೊಲೀಸ್ ಅಧಿಕಾರಿಗಳು ದುರ್ವರ್ತನೆ ತೋರಿದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಎಚ್ಚರಿಸಿದೆ.


ಇಂತಹ ವರ್ತನೆ ಎಸಗುವ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಕುರಿತು ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡುವ ಸುತ್ತೋಲೆ ಹೊರಡಿಸುವಂತೆ ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯ ನಿರ್ದೇಶನ ನೀಡಿದೆ.



Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu