ಕಲಾಪಕ್ಕೆ ಅಡ್ಡಿ ರೀತಿಯ ವರ್ತನೆ ಸಲ್ಲ: ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟ ಹೈಕೋರ್ಟ್
ಕಲಾಪಕ್ಕೆ ಅಡ್ಡಿ ರೀತಿಯ ವರ್ತನೆ ಸಲ್ಲ: ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟ ಹೈಕೋರ್ಟ್
ವಕೀಲರು ನ್ಯಾಯಾಲಯಗಳ ಕಲಾಪಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ವರ್ತನೆ ತೋರಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದ್ದು, ಕ್ಷಮೆ ದಾಖಲಿಸಿದ ಬಳಿಕ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಕ್ತಾಯಗೊಳಿಸಿತು.
ಕರ್ನಾಟಕ ರಾಜ್ಯದಲ್ಲಿ ವಕೀಲರ ಮೇಲಿನ ದೌರ್ಜನ್ಯ ಘಟನೆಗಳನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘ (ಎಎಬಿ) ಕರೆ ನೀಡಿದ್ದ ಪ್ರತಿಭಟನೆಯ ವೇಳೆ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಹಾಲ್‌ನಲ್ಲಿ ಗದ್ದಲ ಉಂಟುಮಾಡಿದ ಆರೋಪದಡಿ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೈಕೋರ್ಟ್ ದಾಖಲಾಗಿತ್ತು.
ಹೈಕೋರ್ಟ್ ದಾಖಲಿಸಿಕೊಂಡಿದ್ದ ನ್ಯಾಯಾಂಗ ನಿಂದನೆ ಅರ್ಜಿ ಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ದ್ವಿಸದಸ್ಯ ನ್ಯಾಯಪೀಠ, ಆರೋಪಿ ವಕೀಲರು ಸಲ್ಲಿಸಿದ ಬೇಷರತ್ ಕ್ಷಮಾಪಣೆ ದಾಖಲಿಸಿಕೊಂಡು ಪ್ರಕರಣವನ್ನು ಇತ್ಯರ್ಥಪಡಿಸಿದೆ.
“ಆರೋಪಿ ವಕೀಲರು ಆರಂಭದಲ್ಲೇ ಬೇಷರತ್ ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸಿರುವುದರಿಂದ ಕ್ಷಮೆಯ ಪ್ರಾಮಾಣಿಕತೆಯನ್ನು ಅನುಮಾನಿಸಲು ಕಾರಣವಿಲ್ಲ' ಎಂಬ ಅಭಿಪ್ರಾಯ ವ್ಯಕ್ತಪಡಿ ಸಿದ ನ್ಯಾಯಪೀಠ ಆರೋಪಿಗಳನ್ನು ಖುಲಾಸೆಗೊಳಿಸಿತು.
ಯಾವುದೇ ಪ್ರತಿಭಟನೆಗಳ ಸಂದರ್ಭದಲ್ಲಿ ವಕೀಲರು ನ್ಯಾಯಾಲಯಗಳ ಕಲಾಪಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ವರ್ತಿಸಬಾರದು' ಎಂಬ ಎಚ್ಚರಿಕೆಯನ್ನು ನೀಡಿದ ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಕ್ತಾಯಗೊಳಿಸಿತು.