ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್ ಪರಿಗಣಿಸಿ, ಅಕ್ರಮ ವಲಸಿಗರನ್ನು ಮತಪಟ್ಟಿಯಿಂದ ಹೊರಗಿಡಿ- ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಹೆಸರು ಸೇರ್ಪಡೆಗೆ 12ನೇ ದಾಖಲೆಯಾಗಿ ಆಧಾರ್ ಕಾರ್ಡನ್ನು ಪರಿಗಣಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜಾಯ್‌ಮಾಲ್ಯ ಬಾಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ 12ನೇ ದಾಖಲೆಯಾಗಿ ಮತದಾರರ 'ಆಧಾರ್' ಅನ್ನು ಪರಿಗಣಿಸಬೇಕು ಎಂದು ನಿರ್ದೇಶನ ನೀಡಿತು. ಆಧಾರ್ ಸಂಖ್ಯೆ ವ್ಯಕ್ತಿಯ ಪೌರತ್ವಕ್ಕೆ ಪುರಾವೆ ಅಲ್ಲ. ಅದನ್ನು ಗುರುತಿನ ದಾಖಲೆಯಾಗಿ ಪರಿಗಣಿಸಬಹುದು. ಮತದಾರ ಸಲ್ಲಿಸಿದ ಆಧಾರ್ ಕಾರ್ಡ್ ಅಸಲಿಯೇ ಅಲ್ಲವೇ ಎನ್ನುವುದನ್ನು ಆಯೋಗವು ಪರಿಶೀಲಿಸಬಹುದು ಎಂದು ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ. 'ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕೆಂದು ಯಾರೂ ಬಯಸುತ್ತಿಲ್ಲ. ಆಯೋಗವು ನೈಜ ಮತದಾರರಿಗೆ ಮಾತ್ರ ಮತ ಚಲಾವಣೆಗೆ ಅವಕಾಶ ನೀಡಬೇಕು. ನಕಲಿ ದಾಖಲೆಗಳ ಆಧಾರದಲ್ಲಿ ನೈಜ ಪ್ರಜೆಗಳು ಎಂದು ಹೇಳಿಕೊಳ್ಳುತ್ತಿರುವವರನ್ನು ಮತದಾರರ ಪಟ್ಟಿಯಿಂದ ಹೊರಹಾಕಬೇಕು' ಎಂದು ಕೋರ್ಟ್ ಸ್ಪಷ್ಟಪಡಿಸಿತು. ಇದೇ ವೇಳೆ, ಮತದಾರರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಚುನಾವಣಾ ಆಯೋಗ, ''ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಶೇಕಡಾ 99.6ರಷ್ಟು ಪೂರ್ಣಗೊಂಡಿದೆ. ಒಟ್ಟು 7.24 ಕೋಟಿ ಮತದಾರರು ಪೂರಕ ದಾಖಲೆ ಸಲ್ಲಿಸಿದ್ದಾರೆ ಎಂದು ಹೇಳಿತು.
Monday, September 8, 2025
ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್ ಪರಿಗಣಿಸಿ, ಅಕ್ರಮ ವಲಸಿಗರನ್ನು ಮತಪಟ್ಟಿಯಿಂದ ಹೊರಗಿಡಿ- ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಬಿಹಾರದಲ್ಲಿ ನಡೆಯುತ್ತಿರ...